ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿದ ನ್ಯಾಯಾಲಯ ಮೇ ೧೪ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಮೂರ್ನಾಲ್ಕು ದಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪೊಲೀಸರ ವಶದಲ್ಲಿದ್ದ ರೇವಣ್ಣ ಅವರನ್ನು ಇನ್ನುಮುಂದೆ ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗುತ್ತದೆ.