ಬೆಂಗಳೂರು : ಇಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಒಳಮೀಸಲು ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲಿಸಿದೆ.
ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶ ಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈ ಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ ದಾಸ್ನೇತೃತ್ವದ ಏಕಸದಸ್ಯ ಆಯೋಗ ಇಂದು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗ ತನ್ನ ವರದಿ ಸಲ್ಲಿಸಿದೆ. ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖಾ ನೇಮಕಾತಿಗಳು, ಬಡ್ತಿ ವಿಚಾರಗಳಿಗೆ ಕೆಲ ತಿಂಗಳಿಂದ ತಡೆಬಿದ್ದಿದೆ.