ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಹಬಟೂರು ರಘು ಆಯ್ಕೆಯಾಗಿದ್ದಾರೆ.
ಇವರು ಸರ್ಕಾರದ ಗ್ಯಾರಂಟಿ ಅನುಷ್ಟಾನ ಸಮಿತಿ ಸದಸ್ಯರಾಗಿ ಮತ್ತು ಚೌತಿ ಗ್ರಾಮ ಪಂಚಾಯತಿ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ, ಈ ವೇಳೆ ರಘು ಅವರು ಮಾತನಾಡಿ ಸಚಿವರಾದ ಕೆ.ವೆಂಕಟೇಶ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಬಿ.ಜೆ ವಿಜಯಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರ ಮಾರ್ಗದರ್ಶನದಲ್ಲಿ ತಾಲ್ಲೂಕಿನಲ್ಲಿ ಯುವ ಕಾಂಗ್ರೆಸ್ ಘಟಕ ಸಂಘಟಿಸಿ ಪಕ್ಷಕ್ಕೆ ಮತ್ತಷ್ಟು ಬಲ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿ ಆಯ್ಕೆಯಾಗಲು ಸಹಕರಿಸಿದ ಹಾಗೂ ಮತ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.
