ಚಾಮರಾಜನಗರ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಮಣಿಪುರ ಸರ್ಕಾರ, ಮತ್ತು ಕಿಡಿಗೇಡಿಗಳ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಮಣಿಪುರ ಮಹಿಳೆಯರ ಮೇಲಿನ ದುಷ್ಕೃತ್ಯ ಅಮಾನವೀಯವಾಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಹಿಂಸಾಚಾರ ನಿಲ್ಲಿಸಬೇಕು. ಇಂತಹ ಕೃತ್ಯ ಎಸಗಿರುವ ಆರೋಪಿಗಳಿಗೆ ಮರಣದಂಡನೆ ವಿದಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳ ಸಂಭವಿಸದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಧ್ವನಿಗೋವಿಂದರಾಜು, ಪಣ್ಯದಹುಂಡಿ ರಾಜು, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಚಾ.ರಾ.ಕುಮಾರ್, ಮಹೇಶ್ ಗೌಡ, ಚಾ.ಸಿ.ಸಿದ್ದರಾಜು, ಶಿವಶಂಕರನಾಯಕ, ವೀರಭದ್ರ, ತಾಂಡವಮೂರ್ತಿ,ಮಹೇಶ್ ಗೌಡ, ಗು.ಪುರುಷೋತ್ತಮ್,ಲಿಂಗರಾಜು, ಪ್ರತಾಪ್, ಆಟೋನಾಗೇಶ್ ಇತರರು ಭಾಗವಹಿಸಿದ್ದರು.