ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ರಾಜ್ಯ ಸರ್ಕಾರದ 2024-25ನೇ ಸಾಲಿನ ಗ್ರಾಮ ಸ್ವರಾಜ್ಯ ಅಭಿಯಾನದಡಿ ರಾಜ್ಯದ 100 ಗ್ರಾಪಂಗಳನ್ನು ಆಯ್ಕೆ ಮಾಡಲಾಗಿದ್ದು ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಹಳಿಯೂರು ಗ್ರಾಪಂನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ರೇಖಾ ಜಗದೀಶ್ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯ್ಕೆಯಾಗಿರುವ 100 ಗ್ರಾಪಂಗಳಲ್ಲಿ ಏಳು ಕೋಟಿ ರು. ಗಳನ್ನು ಹಂಚಿಕೆ ಮಾಡಲಾಗಿದ್ದು, ಅನುಮೋದಿತ ಕ್ರಿಯಾಯೋಜನೆ ಅನ್ವಯ ಪ್ರತಿ ಗ್ರಾಪಂ ಗೆ 7 ಲಕ್ಷ ರು. ಗಳಂತೆ ನೀಡಿದ್ದು, ಸರ್ಕಾರವನ್ನು ಅಭಿನಂದಿಸಿದ್ದಾರೆ.
ಗ್ರಾಪಂ ವ್ಯಾಪ್ತಿಯಲ್ಲಿ ಅಗತ್ಯವಿರುವ ಕಾಮಗಾರಿಗಳಿಗೆ ಈ ಹಣವನ್ನು ವಿನಿಯೋಗಿಸಲಾಗುವುದು ಎಂದು ಅವರು ತಿಳಿಸಿದರು.