ಮಂಡ್ಯ: ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಎರಡನೇ ಅವಧಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಸದಸ್ಯರು ಬಡಿದಾಡಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪರಸ್ಪರ ಚೇರ್ ಗಳನ್ನ ತೂರಾಡಿ, ತಳ್ಳಾಟ ನೂಕಾಟ ನಡೆಸಿ ಕಾಂಗ್ರೆಸ್- ಜೆಡಿಎಸ್ ಬೆಂಬಲಿತ ಸದಸ್ಯರ ನಡುವೆ ಘರ್ಷಣೆ ಉಂಟಾದ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಯನ್ನು ಮುಂದೂಡಿದ ಪ್ರಸಂಗ ಜರುಗಿತು.