ಹನೂರು: ತಾಲ್ಲೂಕಿನ ವಿವಿಧ ಶಾಲೆಗಳ ಸುಮಾರು 1100ವಿದ್ಯಾರ್ಥಿಗಳು ಸಾಮೂಹಿಕ ಏರುಬೀಕ್ಸ್ ನೃತ್ಯವನ್ನು ಪ್ರದರ್ಶಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಬುಧವಾರದಂದು ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಿದ್ದ ಕ್ರೀಡಾಕೂಟದ ಸಮಾರಂಭದಲ್ಲಿ ಹನೂರು ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳು ಲಯಬದ್ಧವಾಗಿ ಸಾಮೂಹಿಕ ಏರೋಬೀಕ್ಸ್ ನ್ರತ್ಯ ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದಿದಿದ್ದಾರೆ.