ಹನೂರು: ಹನೂರು ಪಟ್ಟಣದಲ್ಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮಹೇಶ್ ನೇತೃತ್ವದಲ್ಲಿ ನನ್ನ ದೇಶ ನನ್ನ ಮಣ್ಣು ಅಭಿಯಾನ’ ಕಾರ್ಯಕ್ರಮ ಹನೂರು ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆಸಲಾಯಿತು.
ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆನೀಡಿ ಬಳಿಕ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರನ್ನು ಗೌರವಿಸಲು ದೇಶಾದ್ಯಂತ ‘ನನ್ನ ದೇಶ ನನ್ನ ಮಣ್ಣು ಅಭಿಯಾನ’ಕ್ಕೆ ಕರೆ ನೀಡಿದ್ದಾರೆ. ದೇಶದ ಭದ್ರತೆಗಾಗಿ ಹೋರಾಡಿ ಹುತಾತ್ಮರಾದ ವೀರ ಯೋಧರ ಗೌರವಾರ್ಥ ಈ ಅಭಿಯಾನ ನಡೆಸಲಾಗುತ್ತಿದೆ. ಪ್ರತಿಯೊಬ್ಬ ಭಾರತೀಯರು ಈ ಒಂದು ಅಭಿಯಾನದಲ್ಲಿ ಭಾಗವಹಿಸಿ ಯೋಧರನ್ನು ಗೌರವಿಸುವ ಕಾರ್ಯ ಆಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾದ ಧರ್ಮಲಿಂಗಂ , ಹಾಗೂ ಪಟ್ಟಣ ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ್, ಮದನ್ ಹಾಗೂ ಇನ್ನಿತರರು ಹಾಜರಿದ್ದರು.