Friday, April 4, 2025
Google search engine

HomeUncategorizedರಾಷ್ಟ್ರೀಯಪತಿಯಿಂದ ಕಿರುಕುಳ: ಫೇಸ್ ಬುಕ್ ಲೈವ್ ನಲ್ಲಿ ಮಹಿಳೆ ಆತ್ಮಹತ್ಯೆ

ಪತಿಯಿಂದ ಕಿರುಕುಳ: ಫೇಸ್ ಬುಕ್ ಲೈವ್ ನಲ್ಲಿ ಮಹಿಳೆ ಆತ್ಮಹತ್ಯೆ

ಹೈದರಾಬಾದ್: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ.

ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್‌ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್‌ ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ ಬುಕ್‌ ಲೈವ್‌ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಸ್ತುತ ಹೇಮಂತ್‌ ಡಿಜೆ ಆಗಿ ಕೆಲಸ ಮಾಡುತ್ತಿದ್ದು, ಈ ವೇಳೆ ಡಿಜೆಯಾಗಿರುವ ಯುವತಿಯೊಂದಿಗೆ ಹೇಮಂತ್‌ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದಾರೆ. ಹೇಮಂತ್‌ ಸನಾ ಅವರಿಗೆ ಕಿರುಕುಳ ನೀಡುತ್ತಿದ್ದರು. ಅವರ ಅಕ್ರಮ ಸಂಬಂಧವೇ ಈ ಘಟನೆಗೆ ಕಾರಣವೆಂದು ಮೃತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ.

ಸದ್ಯ ಹೇಮಂತ್ ಹಾಗೂ ಆತನ ಪೋಷಕರ ವಿರುದ್ಧ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಾಚಾರಂ ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular