ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ನೇತೃತ್ವದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ರಂಝಾನ್ ಹಬ್ಬದ ಪ್ರಯುಕ್ತ ಸೌಹಾರ್ದ ಇಫ್ತಾರ್ ಕೂಟವು ಸಂತ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹ ಕುಲಪತಿ ಫಾ. ಮೆಲ್ವಿನ್ ಡಿಕುನ್ಹಾ ಎಸ್.ಜೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಖ್ಯಾತ ಸಾಹಿತಿ, ನಿವೃತ್ತ ಶಿಕ್ಷಕಿ ಬಿ.ಎಂ. ರೋಹಿಣಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಬೆಥನಿ ಮುಖ್ಯಸ್ಥೆ ಸಿಸ್ಟರ್ ರೋಸ್ ಮೇರಿ, ಬಾವುಟಗುಡ್ಡ ಝೀನತ್ ಬಕ್ಷ್ ಜುಮಾ ಮಸ್ಜಿದ್‌ನ ಉಪಾಧ್ಯಕ್ಷ ಕೆ. ಅಶ್ರಫ್ ಮಾತನಾಡಿ ಸೌಹಾರ್ದತೆಯ ಅಗತ್ಯ ಮತ್ತು ಮಹತ್ವವನ್ನು ಸಾರಿದರು.
ವೇದಿಕೆಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರೀತಿಯನ್ನು ಹಂಚುವ ವೇದಿಕೆಯ ಉದ್ದೇಶಗಳನ್ನು ವಿವರಿಸಿದರು. ಸಾಮರಸ್ಯ ಮಂಗಳೂರು ಮುಖ್ಯಸ್ಥೆ ಮಂಜುಳಾ ನಾಯಕ್ ವೇದಿಕೆಯಲ್ಲಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಸರ್ವಧರ್ಮೀಯರು ಸೇರಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು.
ವರದಿ: ಶಂಶೀರ್ ಬುಡೋಳಿ



