Friday, April 11, 2025
Google search engine

Homeರಾಜ್ಯಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡದಿದ್ದರೆ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಎಚ್ಚರಿಕೆ

ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡದಿದ್ದರೆ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಎಚ್ಚರಿಕೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಆಯುಕ್ತರ ಅಧ್ಯಕ್ಷತೆಯಲ್ಲಿ ಅವರು ಪ್ರಗತಿ ಪರಿಶೀಲನೆ ನಡೆಸಿದರು.

ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ವಿಳಂಬ ಮಾಡುತ್ತಿರುವ ಮತ್ತು ನಿರ್ಲಕ್ಷ್ಯ ತೋರಿಸುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಬ್ಯಾಕ್ ಲಾಗ್ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡುವಂತೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿಯೂ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಾಕಿ ಇರುವ ೭೬ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, `ಬ್ಯಾಕ್‌ಲಾಗ್ ನೇಮಕಾತಿಗೆ ವಿನಾಯಿತಿ ನೀಡುವಂತೆ ಹಲವು ನಿಗಮ, ಮಂಡಳಿಗಳು ವಿನಂತಿಸಿವೆ. ಈ ವಿಷಯವನ್ನು ಸಂಪುಟ ಸಭೆಯಲ್ಲಿ ಮಂಡಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

RELATED ARTICLES
- Advertisment -
Google search engine

Most Popular