ಹಾಸನ: ಜಿಲ್ಲೆಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ ಕೃಷ್ಣೇಗೌಡ(53) ಕೊಲೆಯಾದವ.
ಗ್ರಾನೈಟ್ ಫ್ಯಾಕ್ಟರಿ ಎದುರು ಕಾರಿನಲ್ಲಿ ತೆರಳುತ್ತಿದ್ದ ಕೃಷ್ಣೇಗೌಡರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಹಾಸನ ಕ್ಷೇತ್ರದ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ಅವರು ಕೂಡ ಆಗಮಿಸಿದ್ದಾರೆ.
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.