Monday, April 14, 2025
Google search engine

Homeರಾಜ್ಯಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಹಾಸನ: ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ಹಾಸನ: ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರಿಂದ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆ ಮುಟ್ಟುವ ಮಾರ್ಗ ಮಧ್ಯೆದಲ್ಲೇ ಪ್ರಜ್ವಲ್ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular