Monday, April 21, 2025
Google search engine

Homeರಾಜ್ಯಹಾಸನ ಪೆನ್ ಡ್ರೈವ್ ಪ್ರಕರಣ: ಮೇ 30ರಂದು ಹಾಸನ ಚಲೋಗೆ ಕರೆ ನೀಡಿದ CITU

ಹಾಸನ ಪೆನ್ ಡ್ರೈವ್ ಪ್ರಕರಣ: ಮೇ 30ರಂದು ಹಾಸನ ಚಲೋಗೆ ಕರೆ ನೀಡಿದ CITU

ಮಂಡ್ಯ: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ಹಾಸನ ಚಲೋಗೆ CITU ಸಂಘಟನೆ ಕರೆ ಕೊಟ್ಟಿದ್ದಾರೆ.

ಹಾಸನ ಮಹಿಳೆಯ ಮೇಲೆ ಪ್ರಜ್ವಲ್ ರೇವಣ್ಣ ನೀಚ ಕೃತ್ಯ ನಡೆಸಿ ದೌರ್ಜನ್ಯ ನಡೆಸಿದ್ದಾರೆ. ದೌರ್ಜನ್ಯಕ್ಕೆಒಳಗಾದ ಸಂತ್ರಸ್ತ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು. ಪ್ರಜ್ವಲ್ ರೇವಣ್ಣ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ಈ ವಿಚಾರ ಚುನಾವಣೆಗೂ ಮುನ್ನ ಬಿಜೆಪಿಯ ನಾಯಕರು, ಕುಮಾರಸ್ವಾಮಿ, ದೇವೇಗೌಡ್ರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಗೊತ್ತಿದ್ದರು ಸುಮ್ಮನಿದ್ದಾರೆ ಎಂದು ಸುದ್ದಿಗೋಷ್ಟಿಯಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಆರೋಪಿಸಿದ್ದಾರೆ.

ನೇಹಾ ಹತ್ಯೆ ನಡೆದ ಸಂದರ್ಭದಲ್ಲಿ ಬಿಜೆಪಿ ನಾಯಕರು ಮನೆಗೆ ಬಂದು ಸಾಂತ್ವನ ಹೇಳ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ವಹಿಸಿದ್ದಾರೆ. SIT ತನಿಖೆಯನ್ನ ಸೂಕ್ತವಾಗಿ ನಡೆಸಿ ಪ್ರಜ್ವಲ್ ರೇವಣ್ಣ ಬಂಧಿಸಬೇಕು. ಹೊರ ದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಪಾಸ್ ರದ್ದು ಪಡಿಸಬೇಕು. ವೈರಲ್ ಹಾಗಿರುವ ಅಶ್ಲೀಲ ವಿಡಿಯೋಗಳನ್ನ ಮೊದಲು ಡಿಲೀಟ್ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತಕ್ಷಣವೇ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಆಗ್ರಹಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಾಸನ ಚಲೋ ಗೆ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular