Monday, December 2, 2024
Google search engine

Homeಅಪರಾಧಹಾಸನ: ಜೀಪ್‌ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

ಹಾಸನ: ಜೀಪ್‌ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಸಾವು

ಹಾಸನ: ಪೊಲೀಸ್‌ ಬೊಲೆರೋ ಜೀಪ್‌ ಅಪಘಾತಕ್ಕೀಡಾಗಿ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಹರ್ಷಬರ್ಧನ್ (26) ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಭಾನುವಾರ (ಡಿ.1 ರಂದು) ರಾತ್ರಿ ನಡೆದಿದೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. 2022 ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 153 ನೇ ರ‍್ಯಾಂಕ್‌ನಲ್ಲಿ ಪಾಸ್ ಆಗಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು.

ಮೈಸೂರಿನ ಪೊಲೀಸ್‌ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿ, ಹಾಸನ ಜಿಲ್ಲಾ ಎಎಸ್ಪಿಯಾಗಿ ಸೋಮವಾರ (ಇಂದು) ಕಾರ್ಯಭಾರ ವಹಿಸಿಕೊಳ್ಳಬೇಕಿತ್ತು. ಅವರನ್ನು ಹಾಸನದ ಡಿಎಆರ್‌ ಕಾನ್ಸ್‌ಟೇಬಲ್‌ ಮಂಜೇಗೌಡ ಮೈಸೂರಿನಿಂದ ಹಾಸನಕ್ಕೆ ಕರೆತರುತ್ತಿದ್ದಾಗ ಕಿತ್ತಾನೆ ಗಡಿಯಲ್ಲಿ ಬೊಲೆರೋ ಜೀಪ್‌ ಟೈರ್‌ ಸ್ಫೋಟಗೊಂಡು, ಪಲ್ಟಿಯಾಗಿದೆ. ಜೀಪ್‌ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಿಎಂ ಸಂತಾಪ

ಹರ್ಷಬರ್ಧನ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು. ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು.

RELATED ARTICLES
- Advertisment -
Google search engine

Most Popular