Friday, May 1, 2026
Google search engine

Homeರಾಜ್ಯಸುದ್ದಿಜಾಲಮಳೆಗೆ ಬಾಳೆ ಬೆಳೆ ನಾಶ-ರೈತರು ಕಂಗಾಲು

ಮಳೆಗೆ ಬಾಳೆ ಬೆಳೆ ನಾಶ-ರೈತರು ಕಂಗಾಲು

ಹಾಸನ: ಹಾಸನ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಇದರಿಂದ ರೈತರು ಕಣ್ಣೀರಿಡುವ ಪರಿಸ್ಥಿತಿ ಉಂಟಾಗಿದೆ.

ಹಾಸನದ ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ಲೋಕೇಶ್, ಪರಮೇಶ್, ನಾಗರಾಜ್ ಎಂಬುವವರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು ಸರ್ವನಾಶವಾಗಿವೆ.

ಫಸಲಿಗೆ ಬಂದಿದ್ದ ಅಪಾರ ಪ್ರಮಾಣದ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇನ್ನೊಂದು ತಿಂಗಳಿನಲ್ಲಿ ಬಾಳೆಗೊನೆ ಕಟಾವು ಮಾಡಿ ಮಾರಾಟ ಮಾಡಬೇಕಿತ್ತು. ಆದರೆ ಭಾರೀ ಮಳೆ, ಗಾಳಿಗೆ ಬಾಳೆಗೊನೆ ಸಹಿತ ಗಿಡ ಮುರಿದು ಬಿದ್ದಿವೆ ಎಂದು ರೈತರು ಕಣ್ಣಿರಿಡುತ್ತಿದ್ದಾರೆ.

ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ರೈತರು ಒತ್ತಾಯಿಸಿದ್ದಾರೆ. ಇದೇ ಗ್ರಾಮದ ಕೆಲ ರೈತರು ಬೆಳೆದಿದ್ದ ಮೆಕ್ಕೆಜೋಳ ಕೂಡ ನೆಲಕಚ್ಚಿದ್ದು ಎರಡು ವಾಸದ ಮನೆಗಳ ಹಂಚುಗಳು ಹಾರಿ ಹೋಗಿವೆ. ಇಷ್ಟಾದರೂ ಗ್ರಾಮಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

RELATED ARTICLES
- Advertisment -
Google search engine

Most Popular