Sunday, April 20, 2025
Google search engine

Homeರಾಜ್ಯಹತ್ರಾಸ್ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂದಿ

ಹತ್ರಾಸ್ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂದಿ

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸತ್ಸಂಗವೊಂದರ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾದರು.

ದೆಹಲಿಯಿಂದ ಇಂದು ಶುಕ್ರವಾರ ಉತ್ತರ ಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರರಾದ ಸುಪ್ರಿಯಾ ಶ್ರೀನೆತ್ ಮತ್ತು ಪದಾಧಿಕಾರಿಗಳ ಜೊತೆ ಅವರು ಹತ್ರಾಸ್ ತಲುಪಿದ್ದಾರೆ.

ಮೊದಲಿಗೆ ಬೆಳಿಗ್ಗೆ ೭.೧೫ರ ಸುಮಾರಿಗೆ ಅಲಿಗಢದ ಪಿಲಖಾನ ಹಳ್ಳಿಗೆ ತೆರಳಿದ ಅವರು, ಸಂತ್ರಸ್ತರ ಕುಟುಂಬ ವರ್ಗದವರ ಜೊತೆ ಮಾತುಕತೆ ನಡೆಸಿದರು. ಬಳಿಕ, ಹತ್ರಾಸ್‌ಗೆ ತೆರಳಿ ಅಲ್ಲಿಯೂ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರ ನೋವು ಆಲಿಸಿದರು.

ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಇದೊಂದು ದುಃಖಕರ ಘಟನೆ. ಹಲವು ಮಂದಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ನಾನು ರಾಜಕೀಯ ಹೇಳಿಕೆ ನೀಡಲು ಹೋಗುವುದಿಲ್ಲ. ಆದರೆ, ಇಲ್ಲಿನ ಆಡಳಿತ ವರ್ಗದಿಂದ ಲೋಪವಾಗಿದೆ. ಮೃತರ ಕುಟುಂಬ ವರ್ಗದವರು ಕಡುಬಡವರಾಗಿರುವುದರಿಂದ ಗರಿಷ್ಠ ಪರಿಹಾರ ನೀಡುವುದು ಮುಖ್ಯ. ಹೃದಯ ತೆರೆದು ಈ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಪರಿಹಾರ ನೀಡುವುದರಲ್ಲಿ ವಿಳಂಬವಾದರೆ ಅದು ಯಾರಿಗೂ ಅನುಕೂಲವಾಗುವುದಿಲ್ಲ. ಮೃತರ ಕುಟುಂಬ ವರ್ಗದವರ ಜೊತೆ ನಾನು ಮಾತನಾಡಿದೆ. ಸತ್ಸಂಗದ ವೇಳೆ ಪೊಲೀಸ್ ವ್ಯವಸ್ಥೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ಅವರು ಆಘಾತದಲ್ಲಿದ್ದಾರೆ. ಅವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಬಯಸಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಮೃತರ ಕುಟುಂಬದ ಸದಸ್ಯೆ ಮೋನು,ಅವರು ನಮಗೆ ಸಹಾಯ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು. ಅವರ ಪಕ್ಷವು ಅಧಿಕಾರದಲ್ಲಿಲ್ಲದ ಕಾರಣ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular