Friday, April 4, 2025
Google search engine

Homeಅಪರಾಧಹಾವೇರಿ: ಸಾಮೂಹಿಕ ಅತ್ಯಾಚಾರ ಪ್ರಕರಣದ 8ನೇ ಆರೋಪಿ ಬಂಧನ

ಹಾವೇರಿ: ಸಾಮೂಹಿಕ ಅತ್ಯಾಚಾರ ಪ್ರಕರಣದ 8ನೇ ಆರೋಪಿ ಬಂಧನ

ಹಾವೇರಿ: ಜನವರಿ 8ರಂದು ಜಿಲ್ಲೆಯ ಹಾನಗಲ್​ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ 8ನೇ ಆರೋಪಿಯನ್ನ ಹಾವೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಕ್ಕಿಆಲೂರು ಗ್ರಾಮದ ಮಫೀದ್ ಓಣಿಕೇರಿ(23) ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಇನ್ನೂ ಮೂರ್ನಾಲ್ಕು ಆರೋಪಿಗಳು ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ತನಿಖೆ ಮುಂದುವರೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಪಿಎಸ್​ ಐ-ಕಾನ್ ​ಸ್ಟೆಬಲ್​ ಅಮಾನತು: ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ವಿಳಂಬ ಧೋರಣೆ ಅನುಸರಿಸಿದ ಆರೋಪದಡಿ ಹಾನಗಲ್ ಪೊಲೀಸ್ ಠಾಣೆ ಪಿಎಸ್ ಐ ಶ್ರೀಧರ್ ಎಸ್.ಆರ್. ಮತ್ತು ಕಾನ್‌ ಸ್ಟೆಬಲ್ ಇಲಿಯಾಜ್ ಶೇತಸನದಿ ಎಂಬವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಂಶುಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಮಾಹಿತಿ ಸಂಗ್ರಹಿಸುವಲ್ಲಿ ವೈಫಲ್ಯ ಮತ್ತು ಎಫ್ ಐಆರ್ ದಾಖಲಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಅಲ್ಲದೆ, ಆರೋಪಿಗಳ ಬಂಧನದಲ್ಲಿ ವಿಳಂಬ ನೀತಿ ಅನುಸರಿಸಿದ್ದಾರೆ ಎಂದು ಪಿಎಸ್‌ಐ ಮತ್ತು ಕಾನ್ ​ಸ್ಟೆಬಲ್ ಸಸ್ಪೆಂಡ್ ಮಾಡಿರುವುದಾಗಿ ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ಗಾಯಗೊಂಡು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಮದ್ ಸೈಫ್​​ ಕಿಮ್ಸ್ ​ಗೆ ಶಿಫ್ಟ್​ ಆದ ಆರೋಪಿ.

RELATED ARTICLES
- Advertisment -
Google search engine

Most Popular