Friday, April 4, 2025
Google search engine

Homeರಾಜ್ಯಹೆಚ್ .ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೆ

ಹೆಚ್ .ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೆ

ರಾಮನಗರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಡದಿಯ ಕೇತಗಾನಹಳ್ಳಿ ಬಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸರ್ವೇ ಕಾರ್ಯವನ್ನು ನಡೆಸಿದರು.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರೆವಿನ್ಯೂ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿ ಜೊತೆಗೂಡಿ ಸರ್ವೆ ನಡೆಸಿದರು.

ಸುಮಾರು 35ಕ್ಕೂ ಹೆಚ್ಚು ಸರ್ವೇ ನಂಬರ್ ಗಳನ್ನು ಇಂದು ಸರ್ವೇ ಮಾಡಿ ಪರಿಶೀಲಿಸಲಾಯಿತು. ಹೆಚ್ ಡಿ ಕೆ ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿಸಿ ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಸರ್ವೇ ಅಧಿಕಾರಿಗಳು ಸರ್ವೇ ಮಾಡಿದರು.

ಅಂದಹಾಗೇ ಹೆಚ್ ಡಿ ಕೆ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಅಂತ ಆರೋಪಿಸಿ ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕಂದಾಯ ಇಲಾಖೆಗೆ ಹೈಕೋರ್ಟ್ ಸರ್ವೇ ಮಾಡೋದಕ್ಕೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಸರ್ವೇ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular