ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ.
ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್‌ಡಿಕೆ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಒಂದೆರಡು ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿರುವ ಹೆಚ್‌ಡಿಕೆ ಮತ್ತೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಧುಮಕಲಿದ್ದಾರೆ.