Saturday, April 19, 2025
Google search engine

Homeರಾಜ್ಯಹೆಚ್.ಡಿ.ಕುಮಾರಸ್ವಾಮಿ ಅವರು ಚೇತರಿಕೆ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್: ನಿಖಿಲ್ ಕುಮಾರಸ್ವಾಮಿ

ಹೆಚ್.ಡಿ.ಕುಮಾರಸ್ವಾಮಿ ಅವರು ಚೇತರಿಕೆ, ಶೀಘ್ರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್: ನಿಖಿಲ್ ಕುಮಾರಸ್ವಾಮಿ

ಕೆಲ ದಿನಗಳ ವಿಶ್ರಾಂತಿ ನಂತರ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ನಮ್ಮ ತಂದೆಯವರ ಆರೋಗ್ಯ ಉತ್ತಮವಾಗಿ ಚೇತರಿಸಿಕೊಂಡಿದ್ದು, ಶೀಘ್ರದಲ್ಲಿಯೇ ಅವರು ಮನೆಗೆ ಮರಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು  ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದಿದ್ದಾರೆ ಅವರು.

ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular