Wednesday, April 16, 2025
Google search engine

Homeಅಪರಾಧದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಯಲಹಂಕ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ(ಜುಲೈ7) ಸಂಜೆ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿ ಹೊಡೆದ ಬೈಕ್​ ನಲ್ಲಿದ್ದವರಿಗೂ ಗಾಯಗಳಾಗಿವೆ.

ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಕಾಲೇಜು ವಿದ್ಯಾರ್ಥಿನಿ ಬರುತ್ತಿದ್ದಳು. ಇದೇ ಸಮಯಕ್ಕೆ ಮತ್ತೊಂದು ಬೈಕ್ ನಲ್ಲಿ ಎದುರು ಬಂದ ಇಬ್ಬರು ಯುವಕರು ಅಡ್ಡಾ- ದಿಡ್ಡಿ ಬಂದು ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ತಕ್ಷಣವೇ ಅಲ್ಲಿದ್ದ ಸ್ಥಳೀಯರು ಗಾಯಾಳು ವಿದ್ಯಾರ್ಥಿನಿ ಹಾಗೂ ಯುವಕರನ್ನು ಯಲಹಂಕ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಪಘಾತಕ್ಕೆ ಒಳಗಾದ ಯುವಕರು ರಾಮಗೊಂಡನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.

ಅಪಘಾತದ ವಿಡಿಯೋ ಪಕ್ಕದಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಯಲಹಂಕ‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular