ಕೆ.ಆರ್.ಪೇಟೆ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಟ್ಟಣದ ತಾಲೂಕು ಕಛೇರಿಯ ಆರ್.ಆರ್.ಟಿ ಶಿರಸ್ತೇದಾರ್ ಬಿ.ಆರ್.ರವಿ ಅವರನ್ನು ಕರ್ತವ್ಯದಿಂದ ಅಮಾನತ್ತುಗೊಳಿಸಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಡಾ.ಜಿ.ಸಿ.ಪ್ರಕಾಶ್ ಆದೇಶಿಸಿದ್ದಾರೆ.
ಪಟ್ಟಣದ ತಾಲೂಕು ಕಛೇರಿಯ ಆರ್.ಆರ್.ಟಿ ಶಿರಸ್ತೆದಾರ್ ಆದ ಬಿ.ಆರ್.ರವಿ ಅವರು ೨೦೨೨ ಮತ್ತು ೨೩ ನೇ ಸಾಲಿಗೆ ಸಂಬಂಧಪಟ್ಟ ೨೪೧ ಕಡತಗಳನ್ನು ಉದ್ದೇಶಪೂರ್ವಕವಾಗಿ ಕಳೆದ ೦೬ ತಿಂಗಳುಗಳಿಗಿಂತಲೂ ಹೆಚ್ಚಿನ ಅವಧಿಯಲ್ಲಿ ತಮ್ಮ ಬಳಿಯೇ ಇಟ್ಟುಕೊಂಡು ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷತೆ ವಹಿಸಿ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಮತ್ತು ಶಿಸ್ತು ಪ್ರಾಧಿಕಾರಿಯಾದ ನಾನು ನನಗೆ ದತ್ವಾಗಿರುವ ಅಧಿಕಾರವನ್ನು ಚಲಾಯಿಸಿ ಬಿ.ಆರ್.ರವಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು ೧೯೫೭ ರ ನಿಯಮ-೧೦(೧)(ಡಿ) ಮತ್ತು (೩) ರ ಪ್ರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿರುವುದಾಗಿ ಪ್ರಾದೇಶಿಕ ಆಯುಕ್ತರಾದ ಜಿ.ಸಿ.ಪ್ರಕಾಶ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.