Friday, April 18, 2025
Google search engine

Homeರಾಜ್ಯಆಗಸ್ಟ್ 3ರಂದು ನಡೆಯಲಿರುವ ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಲು ಅಶ್ವಿನಿ ಪುನೀತ್ ಗೆ ಆರೋಗ್ಯ ಇಲಾಖೆ...

ಆಗಸ್ಟ್ 3ರಂದು ನಡೆಯಲಿರುವ ಅಂಗಾಂಗ ದಾನ ದಿನಾಚರಣೆಗೆ ರಾಯಭಾರಿಯಾಗಲು ಅಶ್ವಿನಿ ಪುನೀತ್ ಗೆ ಆರೋಗ್ಯ ಇಲಾಖೆ ಆಹ್ವಾನ

ವರನಟ ಡಾ ರಾಜಕುಮಾರ್ ಅವರಂತೆಯೇ ಪುನೀತ್ ರಾಜಕುಮಾರ್ ಅವರು ಸಹ ಕಣ್ಣುಗಳ ದಾನ ಮಾಡಿದ್ದರು. ಇದು ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಇದೇ ಕಾರಣದಿಂದ ರಾಜ್ಯದಲ್ಲಿ ಅಂಗಾಂಗ ದಾನ ಮಾಡುವವರ ಸಂಖ್ಯೆ ಜಾಸ್ತಿಯಾಗಿತ್ತು. ಕನ್ನಡ ಚಿತ್ರರಂಗದ ದೊಡ್ಮನೆ ಅಂಗಾಂಗ ದಾನಕ್ಕೆ ಪ್ರೇಕರಣೆಯಾಗಿರುವುದನ್ನು ಗಮನದಲ್ಲಿರಿಸಿಕೊಂಡು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 3ರಂದು ನಡೆಯಲಿರುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ. ದೊಡ್ಮನೆ ಕುಟುಂಬ ಅಂಗಾಂಗ ದಾನಕ್ಕೆ ಪ್ರೇರಣೆಯಾಗಿರುವುದನ್ನು ಗಮನಿಸಿರುವ ಸಚಿವರು, ಆರೋಗ್ಯ ಇಲಾಖೆಯ ವತಿಯಿಂದ ಅಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ.

ವರನಟ ಡಾ.ರಾಜಕುಮಾರ್ ಅವರಂತೆಯೇ ಪುನೀತ್ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿದ್ದರು. ಪುನೀತ್ ರಾಜಕುಮಾರ್ ಅವರು ಕಣ್ಣುಗಳ ದಾನ ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅಲ್ಲದೇ ರಾಜ್ಯದಲ್ಲಿ ಅಂಗಾಂಗ ದಾನ ಪ್ರಮಾಣ ಏರಿಕೆ ಕೂಡಾ ಕಂಡಿತ್ತು. ಅನೇಕರು ದಿ.ಪುನೀತ್ ರಾಜಕುಮಾರ್ ಅವರನ್ನೇ ಮಾದರಿಯನ್ನಾಗಿಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

8 ಮಂದಿಗೆ ಜೀವದಾನ ಸಾಧ್ಯ

ಅಂಗಾಂಗ ದಾನದ ಮೂಲಕ ಒಬ್ಬ ದಾನಿ ತನ್ನ ಸಾವಿನ ಬಳಿಕವೂ 8 ಜನರಿಗೆ ಜೀವದಾನ ಮಾಡಬಹುದಾಗಿದೆ. ಅಲ್ಲದೇ ಅಂಗಾಂಶ ದಾನದ ಮೂಲಕ 50 ಜನರ ಜೀವವನ್ನ ಉಳಿಸಬಹುದಾಗಿದೆ. ಜೀವನದ ಸಾರ್ಥಕತೆ ಕಾಣಬಹುದಾದ ಅಂಗಾಂಗ ದಾನಕ್ಕೆ ಸರ್ಕಾರದಿಂದ ಹೆಚ್ಚು ಪ್ರೋತ್ಸಾಹ ನೀಡುವತ್ತ ಕಾರ್ಯಕ್ರಮಗಳನ್ನ ರೂಪಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.

ಅಗಸ್ಟ್ 03 ರಂದು ಅಂಗಾಂಗ ದಾನ ದಿನಾಚರಣೆಗೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ, ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂಗಾಂಗ ದಾನದ ಪ್ರಮಾಣ ಪ್ರತಿ ಮಿಲಿಯನ್‌ ಜನಸಂಖ್ಯೆಗೆ 0.08 ರಷ್ಟಿದೆ. ಸುಮಾರು 3 ಲಕ್ಷ ಜನರು ಮೂತ್ರಪಿಂಡ ಕಸಿಗಾಗಿ ಕಾಯುತ್ತಿದ್ದಾರೆ. ಆದರೆ ಪ್ರತಿ ವರ್ಷ ಕೇವಲ 10,000 ಜನರು ಮಾತ್ರ ಕಸಿ ಪಡೆಯುತ್ತಾರೆ.

ಭಾರತದಲ್ಲಿ ಸುಮಾರು 50,000 ರೋಗಿಗಳಗೆ ಹೃದಯ ಕಸಿ ಅಗತ್ಯವಿದೆ. ಆದರೆ 1% ಜನರು ಮಾತ್ರ ಅಂಗಾಂಗವನ್ನು ಪಡೆಯುತ್ತಿದ್ದಾರೆ. 2 ಲಕ್ಷ ಭಾರತೀಯರಿಗೆ ಕಾರ್ನಿಯಾ ಕಸಿ ಅಗತ್ಯವಿದೆ. ಆದರೆ ಪ್ರತಿ ವರ್ಷ ಕೇವಲ 50,000 ಕಾರ್ನಿಯಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ.

ಮಾನವ ಅಂಗಾಂಗ ಹಿಂಪಡೆವ ಕೇಂದ್ರ ಸ್ಥಾಪನೆ

ರಾಜ್ಯ ಸರ್ಕಾರವು ಮಾನವ ಅಂಗಾಂಗಗಳ ಕೊರತೆಯನ್ನು ನೀಗಿಸಲು ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದ್ದು,ನಿಮ್ಹಾನ್ಸ್ ಸೇಲದಂತೆ ಸರ್ಕಾರಿ ವೈದ್ಯಕೀಯಕಾಲೇಜುಗಳಲ್ಲಿ ಮಾನವ ಅಂಗಾಂಗ ಹಿಂಪಡೆಯುವ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಅಂಗಾಂಗ ಹಿಂಪಡೆಯುವಿಕೆ ಪ್ರಾರಂಭಿಸಲಾಗಿದೆ. ಮೆದುಳು ನಿಷ್ಕ್ರಿಯ ಹೊಂದದ ರೋಗಿಗಳನ್ನು ಗುರುತಿಸಿ ಅಂಗಾಂಗ ದಾನ ಮಾಡುವ ಕುರಿತು ಸಮಾಲೋಚನೆಗಳನ್ನ ಸಂಬಂಧಿಸಿದವರೊಂದಿಗೆ ನಡೆಸಲಾಗುತ್ತಿದೆ.‌

ಸರ್ಕಾರದ ವತಿಯಿಂದ ಬಡರೋಗಳಿಗೆ ಉಚಿತ ಅಂಗಾಂಗ ಕಸಿ ಮಾಡುವ ಯೋಜನೆ ಆರಂಭಿಸಲಾಗಿದ್ದು, ಇದುವರೆಗೂ 73 ರೋಗಿಗಳು ಪ್ರಯೋಜನ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ನರವಿಜ್ಞಾನ ಸಂಸ್ಥೆ ಹಾಗೂ ಕರ್ನಾಟಕ ವೈದ್ಯಕೀಯ ಸಂಸ್ಥೆ, ಕಿಮ್ಸ್ ಹುಬ್ಬಳ್ಳಿಯಲ್ಲಿ ಕಿಡ್ನಿ ಕಸಿ ಮಾಡಲಾಗುತ್ತಿದೆ.

RELATED ARTICLES
- Advertisment -
Google search engine

Most Popular