Monday, April 21, 2025
Google search engine

Homeರಾಜ್ಯಸುದ್ದಿಜಾಲಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಮನವಿ

ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಮನವಿ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಅನುಷ್ಠಾನಗೊಳಿಸುತ್ತಿದ್ದು, ನಗರದ ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಕೋವಿಡ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವ 18 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿಯುಳ್ಳವರು, ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ಚಾಮರಾಜನಗರ ಜಿಲ್ಲೆಗೆ 440 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಸರಬರಾಜಾಗಿದೆ.

ಕೋವಿಶೀಲ್ಡ್, ಕೋವ್ಯಾಕ್ಸಿನ್ ಎರಡು ಡೋಸ್ ಲಸಿಕೆ ಪಡೆದು 6 ತಿಂಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು, ಆದ್ಯತೆ ಮೇರೆಗೆ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿಯುಳ್ಳವರು, ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಲು ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 100 ಡೋಸ್, ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 80 ಡೋಸ್, ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಯಲ್ಲಿ 140 ಡೋಸ್, ಯಳಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಡೋಸ್, ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 80 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆ ಪ್ರಸ್ತುತ ಲಭ್ಯವಿದೆ.ಚಾಮರಾಜನಗರ ಜಿಲ್ಲಾ ಆಸ್ಪತ್ರೆ, ಗುಂಡ್ಲುಪೇಟೆ, ಕೊಳ್ಳೇಗಾಲ, ಯಳಂದೂರಿನ ಸಾರ್ವಜನಿಕ ಆಸ್ಪತ್ರೆ ಮತ್ತು ಹನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರಂ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular