Monday, April 21, 2025
Google search engine

Homeರಾಜ್ಯಇಂದಿನ ಜನತಾ ದರ್ಶನದಲ್ಲಿ 405ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ

ಇಂದಿನ ಜನತಾ ದರ್ಶನದಲ್ಲಿ 405ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ

ಧಾರವಾಡ : ಮುಖ್ಯಮಂತ್ರಿಗಳ ಜನಪರ ಕಾಳಜಿಯ ಇಂದಿನ ಸಂಕೇತ (ಸೆ.25) ಜಿಲ್ಲಾಡಳಿತ ಅಚ್ಚುಕಟ್ಟಾಗಿ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮ, ಜಿಲ್ಲೆಯ ನಾನಾ ಗ್ರಾಮಗಳ ನಾಗರಿಕರು ಪಾಲ್ಗೊಂಡು ಜನತಾದರ್ಶನ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಜನತಾದರ್ಶನ ಆಯೋಜಿಸದಂತೆ ಕ್ರಮ ಕೈಗೊಳ್ಳುವುದಾಗಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಇಂದು ಸಂಜೆ ಧಾರವಾಡದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯ ಸಾರ್ವಜನಿಕರಿಗೆ ಅತೀ ಕಡಿಮೆ ಅವಧಿಯಲ್ಲಿ ಜನತಾದರ್ಶನದ ಮಾಹಿತಿ ನೀಡಿ ನಾನಾ ಗ್ರಾಮಗಳಿಂದ ಪಾಲ್ಗೊಳ್ಳುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿತ್ತು. ಇಂದಿನ ಜನತಾ ದರ್ಶನಕ್ಕೆ 405ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ ಶೇ. ಶೇ.50ರಿಂದ 60ರಷ್ಟು ಪ್ರಕರಣಗಳಿಗೆ ರಾಜ್ಯಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ವರದಿ ಸಲ್ಲಿಕೆಗಳನ್ನು ಮನವರಿಕೆ ಮಾಡಿಕೊಡಲಾಗಿದ್ದು, ಅರ್ಜಿಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಂಬಂಧಪಟ್ಟ ರಾಜ್ಯ ಮಟ್ಟದ ಇಲಾಖಾ ಮುಖ್ಯಸ್ಥರಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

ಕೆಲವು ಅಹವಾಲುಗಳು ಸ್ಥಳೀಯ ಮಟ್ಟದಲ್ಲಿದ್ದು, ಸ್ಥಳೀಯವಾಗಿಯೇ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೂರುದಾರರೊಂದಿಗೆ ಸಮಾಲೋಚನೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಅವಳಿ ಮಹಾನಗರ ಜಗದೀಶ್ ನಗರ, ರಾಮನಗರ, ನೆಹರು ನಗರಗಳಲ್ಲಿ ಆಶ್ರಯ ಮನೆಗಳ ಹಕ್ಕು ಕುರಿತು ಜನತಾದರ್ಶನದಲ್ಲಿ ಬಂದಿರುವ ಅಹವಾಲುಗಳ ಬಗ್ಗೆ ದೂರುಗಳಿದ್ದು, ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಿ ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಯಿಂದ ಪಡೆದು, ಆಶ್ರಯ ನಿವೇಶನದ ಸಮೀಕ್ಷೆ ಪೂರ್ಣಗೊಳಿಸಿ. ಇನ್ನೆರಡು ತಿಂಗಳಲ್ಲಿ ಮನೆಮನೆಗೆ ತೆರಳಿ ಸರ್ವಪಕ್ಷ ಪ್ರತಿನಿಧಿಗಳು, ಪಾಲಿಕೆ ಸದಸ್ಯರ ಸಭೆ ನಡೆಸಿ ಸರಕಾರಕ್ಕೆ ಸೂಕ್ತ ಶಿಫಾರಸು ಮಾಡುವಂತೆ ಚಿವು ತಿಳಿಸಿದರು.

ಬೆಳೆ ನಷ್ಟ ಸಮೀಕ್ಷೆ ಆರಂಭಿಸಿ ಸರಕಾರಕ್ಕೆ ಸೂಕ್ತ ಪರಿಹಾರ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಅವಶ್ಯವಿರುವ ಕಡೆಗಳಲ್ಲಿ ಬೋರ್‌ವೆಲ್ ಹಾಗೂ ಇತರೆ ಜಲಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಮುಂದಿನ ಐದು ತಿಂಗಳಲ್ಲಿ ಜಾನುವಾರುಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹವಿದೆ. ಯಾವುದೇ ರೀತಿಯ ಮೇವಿನ ಕೊರತೆ ಇಲ್ಲ. ಪ್ರತಿ ಜಿಲ್ಲೆಯ ನೀರಿನ ಲಭ್ಯತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಉಚಿತ ಮೇವಿನ ಬೀಜಗಳನ್ನು ವಿತರಿಸುವ ಮೂಲಕ ಮೇವು ಬೆಳವಣಿಗೆಗೆ ಉತ್ತೇಜನ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಮೇವಿನ ಕೊರತೆಯ ಬಗ್ಗೆ ದೂರುಗಳು ಬಂದಲ್ಲಿ ಕೂಡಲೇ ತಾಲೂಕು ಆಡಳಿತ ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಭೂ ನೋಂದಣಿ ಹಾಗೂ ಭೂ ಪರಿವರ್ತನೆ ಕುರಿತು ರಾಜ್ಯ ಸರ್ಕಾರ ಪ್ರಕಟಿಸಿರುವ ಪರಿಷ್ಕರಣೆ ದರ ಸರಿಯಿಲ್ಲ. ಅದನ್ನು ಮತ್ತೊಮ್ಮೆ ಪರಿಷ್ಕರಿಸಿ ಇದೀಗ ಘೋಷಿಸಿದ ದರವನ್ನು ಕಡಿಮೆ ಮಾಡುವಂತೆ ಈಗಾಗಲೇ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಇಂದಿನ ಜನತಾ ದರ್ಶನದಲ್ಲಿ ಸಲ್ಲಿಸಿರುವ ವರದಿಯನ್ನು ಸಚಿವರು ಹಾಗೂ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಧಾರವಾಡ ತಹಶೀಲ್ದಾರ್ ದೊಡ್ಡಪ್ಪ ಫುಗಾರ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular