ಬೆಂಗಳೂರು : ಇಂದು ಹಾಸನದ ಎಸ್ಎಮ್ ಕೃಷ್ಣ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ವೇದಿಕೆ ಮುಂಭಾಗ ಜಮಾಯಿಸಿದ್ದಾರೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ ವಿಚಾರಣೆ ಕೂಡ ನಡೆಯಲಿದೆ.
ಹೌದು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದ ಜನ ಕಲ್ಯಾಣ ಸಮಾವೇಶಕ್ಕೂ ತೆರಳುವ ಮುಂಚೆ ಆಪ್ತ ಸಚಿವರ ಜೊತೆಗೆ ಹಾಗೂ ಕಾನೂನು ತಜ್ಞರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಈ ವಿಚಾರವಾಗಿ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್ ನಲ್ಲಿ ಆಪ್ತ ಸಚಿವರ ಜೊತೆಗೆ ಸಿಎಂ ಚರ್ಚೆ ನಡೆಸಿದ್ದಾರೆ. ಉಪಹಾರದ ಜೊತೆಗೆ ಮುಡಾ ಕೇಸ್ ಕುರಿತು ಸಿಎಂ ಚರ್ಚೆ ನಡೆಸಿದ್ದಾರೆ. ಅಡ್ವೋಕೇಟ್ ಜನರಲ್ ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆಗೆ ಚರ್ಚೆ ನಡೆಸಿದ್ದು, ಈಗಾಗಲೇ ಅಡ್ವೋಕೇಟ್ ಜನರಲ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತೆರಳಿದ್ದಾರೆ. ಸುಪ್ರೀಂ ಕೋರ್ಟ್ ಹಿರಿಯ ಕಾನೂನು ತಜ್ಞ ಅಭಿಷೇಕ ಮನುಸಿಂಗ್ವಿ ಸಿಎಂ ಜೊತೆ ಚರ್ಚಿಸಿ ತೆರಳಿದ್ದಾರೆ ಎಂದು ತಿಳಿಬಂದಿದೆ.