ತಾಂಡವಪುರ : ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಂಡ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ರವರನ್ನು ವರುಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸುನಿಲ್ ಬೋಸ್ ರವರನ್ನು ಹೆಗಲ ಮೇಲೆ ಹೊತ್ತು ಹೂವಿನ ಹಾರ ಹಾಕಿ ಸಂಭ್ರಮಿಸಿ ಅಭಿನಂದಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಬೋಸ್ ರವರು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕ್ಷೇತ್ರದ ಮತದಾರರು ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ನಾನು ಆಭಾರಿಯಾಗಿದ್ದೇನೆ ಜೊತೆಗೆ ಕೇಂದ್ರ ಸರ್ಕಾರದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮ ವಹಿಸುತ್ತೇನೆ, ಅಲ್ಲದೆ ನನ್ನ ಗೆಲುವಿಗೆ ಕಾರಣಕರ್ತರಾದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ , ಕಾರ್ಯಕರ್ತರಿಗೆ ನಾವು ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವರುಣ ಕ್ಷೇತ್ರದ ದಲಿತ ನಾಯಕ ಹಾಗೂ ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನೆ ಸಮಿತಿಯ ಮಾಜಿ ಅಧ್ಯಕ್ಷ ಇಂಧನ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಹೇಳವರಹುಂಡಿ ಸೋಮು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ ,ಕುರಿಹುಂಡಿ ರಾಜು ,ಉದ್ಯಮಿ ಗಿರೀಶ್ ಹಳ್ಳಿ ಜಿಡ್ಡಿ ,ಆರ್ ಮಹದೇವ್ ಹಳಗಂಚಿ ಚಿನ್ನಸ್ವಾಮಿ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.