Friday, April 18, 2025
Google search engine

Homeರಾಜ್ಯ20 ರಾಜ್ಯಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

20 ರಾಜ್ಯಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ನವದೆಹಲಿ : ಕರ್ನಾಟಕ ಸೇರಿದಂತೆ ಭಾರತದ ೨೦ ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಇಂದು ಮಂಗಳವಾರ ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಈ ವರ್ಷ ಮುಂಗಾರು ಮಳೆಯು ದೇಶದ ಅನೇಕ ರಾಜ್ಯಗಳಲ್ಲಿ ವಿನಾಶವನ್ನು ಉಂಟುಮಾಡಿದೆ. ಅಸ್ಸಾಂ ಮತ್ತು ಗುಜರಾತ್ ನಂತರ ದಕ್ಷಿಣ ಭಾರತದ ಹಲವು ರಾಜ್ಯಗಳು ಪ್ರವಾಹದಲ್ಲಿ ಮುಳುಗಿವೆ. ಆಂಧ್ರ ಹಾಗೂ ತೆಲಂಗಾಣ ೨ ರಾಜ್ಯಗಳಲ್ಲಿ ೩೦ ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕಳೆದ ಒಂದು ತಿಂಗಳಿನಿಂದ ದೆಹಲಿಯಿಂದ ಹಿಮಾಚಲ ಪ್ರದೇಶದವರೆಗೆ ಮಳೆಯಾಗುತ್ತಿದೆ.

ಮಳೆಯಿಂದಾಗಿ ಬಯಲು ಸೀಮೆಯಲ್ಲಿ ಹಿತಕರವಾದ ವಾತಾವರಣವಿದ್ದರೂ, ತೇವಾಂಶದಿಂದ ಕೂಡಿರುವ ಜನರು ತೊಂದರೆಗೀಡಾಗಿದ್ದಾರೆ. ಇಂದು ಕೂಡ ಕರ್ನಾಟಕ ಸೇರಿದಂತೆ ೨೦ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಮಾನ್ಸೂನ್ ಮಾರುತಗಳು ಅರಬ್ಬಿ ಸಮುದ್ರದ ವಾಯುವ್ಯದಲ್ಲಿ ಒತ್ತಡದ ಪ್ರದೇಶವನ್ನು ಸೃಷ್ಟಿಸಿವೆ. ಆದ್ದರಿಂದ, ದೇಶದಾದ್ಯಂತ ಹವಾಮಾನವು ಕಠಿಣವಾಗಿದೆ ಮತ್ತು ಬಯಲು ಪ್ರದೇಶದಿಂದ ಮಲೆನಾಡಿನವರೆಗೆ ಭಾರೀ ಮಳೆಯಾಗುತ್ತಿದೆ. ಇಂದು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಅಂಡಮಾನ್ ನಿಕೋಬಾರ್, ಕರ್ನಾಟಕ, ಕೇರಳ, ಉತ್ತರಾಖಂಡ, ಹಿಮಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಒಡಿಶಾ, ಗೋವಾ, ಆಂಧ್ರಪ್ರದೇಶ, ತಮಿಳುನಾಡು ಬಿಹಾರ ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನ, ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಕಾರ ಮುಂದಿನ ೭ ದಿನಗಳ ಕಾಲ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಮುಂದಿನ ೩ ದಿನಗಳ ಕಾಲ ದೆಹಲಿ, ಹಿಮಾಚಲ ಪ್ರದೇಶ, ತೆಲಂಗಾಣ, ಜಾರ್ಖಂಡ್‌ನಲ್ಲಿ ಉತ್ತಮ ಮಳೆಯಾಗಲಿದೆ.

RELATED ARTICLES
- Advertisment -
Google search engine

Most Popular