ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಭಾಗ ಹಾಗೂ ಉಕ್ಕೇರಿ ತಾಲೂಕುಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ನಾಲ್ಕು ತಾಲೂಕುಗಳ ಅಂಗನವಾಡಿ, ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ .ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ.