ಬೆಂಗಳೂರು: ಮುಂದಿನ ಒಂದು ವಾರ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.