ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದ ಮಳೆ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಡಿಮೆಯಾಗಿ ಬಿರು ಬಿಸಿಲಿನ ತಾಪಮಾನ ಏರಿಕೆಯಿಂದ ನದಿಗಳ ನೀರು ಇಳಿಕೆ ಕಂಡಿತ್ತು. ಆದರೆ ನಿನ್ನೆ ಸಂಜೆಯಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಜನರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.