ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆ ಸುರಿಯಿತು. ಯಾಕಂದ್ರೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು. ಹೀಗಾಗಿ ಗುಡುಗು ಸಹಿತ ಭಾರಿ ಮಳೆ ಸುರಿಯಿತು. ಇನ್ನು ಜೂ.12ರಂದು ಆರೆಂಜ್, ಜೂ.13 ಮತ್ತು 14ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.
ಜಿಲ್ಲೆಯಲ್ಲಿ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ದ.ಕ.ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನವರೆಗೆ ಉಳ್ಳಾಲದಲ್ಲಿ ಗರಿಷ್ಠ 31.1 ಮಿಲಿ ಮೀಟರ್ ಮಳೆಯಾಗಿದೆ. ಜಿಲ್ಲೆಯ ಸರಾಸರಿ ಮಳೆ 33 ಮಿ.ಮೀ. ಆಗಿದೆ. ಬೆಳ್ತಂಗಡಿ 26.4 ಮಿ.ಮೀ, ಬಂಟ್ವಾಳ 21.8 ಮಿ.ಮೀ, ಮಂಗಳೂರು 30.1 ಮಿ.ಮೀ, ಪುತ್ತೂರು 29 ಮಿ.ಮೀ, ಸುಳ್ಯ 25.7 ಮಿ.ಮೀ, ಮೂಡುಬಿದಿರೆ 24.9 ಮಿ.ಮೀ, ಕಡಬ 23.2 ಮಿ.ಮೀ. ಮಳೆ ದಾಖಲಾಗಿದೆ.