ಹೊಸದಿಲ್ಲಿ: ದಿಲ್ಲಿಯಲ್ಲಿ ಇಂದು ಭಾರೀ ಮಳೆಯಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ದಿಲ್ಲಿ, ನೋಯ್ಡಾ ಹಾಗೂ ಗಾಝಿಯಾಬಾದ್‌ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.
ದಿಲ್ಲಿ ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ನಿನ್ನೆಯೂ ಸಾಧಾರಣ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಹಿಂಡನ್ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಗ್ರೇಟರ್ ನೋಯ್ಡಾದಲ್ಲಿ ಹಲವಾರು ಮನೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.
ದಿಲ್ಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ಮಂಗಳವಾರ ಬೆಳಗ್ಗೆ ೭ ಗಂಟೆಗೆ ೨೦೫.೪೫ ಮೀಟರ್‌ಗಳಷ್ಟು ನೀರಿನ ಮಟ್ಟ ದಾಖಲಾಗಿದೆ. ಯಮುನಾ ನದಿಯ ಅಪಾಯದ ಗುರುತು ೨೦೫.೩೩ ಮೀಟರ್‌ನಲ್ಲಿದೆ. ಸೋಮವಾರ ಯಮುನಾದಲ್ಲಿ ನೀರಿನ ಮಟ್ಟ ೨೦೬.೫೬ ಮೀಟರ್ ಇತ್ತು.