ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಕರಾವಳಿ ಪ್ರದೇಶದ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಜೋರು ಮಳೆಯಯಾಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಇಲಾಖೆ ವರದಿ ಮಾಡಿದೆ.
ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



