ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಹವಾಮಾನ ಇಲಾಖೆ ಮತ್ತೆ ಮೂರು ದಿನ ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ ೩ ರವರೆಗೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ ೨೪ ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.