ಮಂಗಳೂರು: ಕರ್ನಾಟಕದ ೨೦ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸೇರಿ ಕರ್ನಾಟಕದ ೨೦ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ ೨೯ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.