ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬಂಟ್ವಾಳ, ಪುತ್ತೂರು, ಕಡಬ, ಸುಬ್ರಹ್ಮಣ್ಯ ಸುತ್ತ ನಿನ್ನೆ ಸಂಜೆಯಿಂದ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ.
ಮಂಗಳೂರು ನಗರರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆಯವರೆಗೂ ಭಾರೀ ಮಳೆ ಸುರಿದಿದೆ.
ಅಲ್ಲಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಧ್ಯೆ ನೀರು ನಿಂತು ಜನರಿಗೆ ತೊಂದರೆ ಉಂಟಾಗಿದೆ.