ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಮೂಡಿಗೆರೆ, ಕಳಸ ,ಕೊಪ್ಪ, ಎನ್.ಆರ್.ಪುರ ತಾಲೂಕಿನಾದ್ಯಂತ ರಭಸವಾದ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.