ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆ ಸುರಿಯಲಿದ್ದು, 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.4ರಿಂದ 10ರವರೆಗೆ ಉತ್ತಮ ಮಳೆಯಾಗಲಿದೆ. ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಜಾಸ್ತಿ ಇರಲಿದೆ.
ಎಲ್ಲೆಲ್ಲಿ ಮಳೆ..?
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್. ಗದಗ, ಹಾವೇರಿ, ಕೊಪ್ಪಳ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದೆ. ಮುಂದಿನ ಒಂದು ವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದ್ದು, ಇಂದಿನಿಂದ 5 ದಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜಧಾನಿ ಬೆಂಗಳೂರಲ್ಲಿ 3 ದಿನ ಮಳೆ ಆಗಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಅ. 5& 6 ಕ್ಕೆ ಎಲ್ಲೆಲ್ಲಿ ಮಳೆ..?
ಮುಂದಿನn2-3 ಮಳೆ ತೀವ್ರತೆ ಹೆಚ್ಚಾಗಲಿದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಾವಣಗೆರೆ, ತುಮಕೂರು, ಧಾರವಾಡ, ರಾಯಚೂರು, ಬಳ್ಳಾರಿ, ಕೊಡಗು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ. 10 ರವರೆಗೆ ಮಳೆ ಮುಂದುವರಿಯಲಿದೆ.ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ವಿಜಯಪುರ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಅಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ 30-40 ಕಿಮೀ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.