Saturday, May 31, 2025
Google search engine

Homeರಾಜ್ಯರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ರೆಡ್-ಆರೆಂಜ್’ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ರೆಡ್-ಆರೆಂಜ್’ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ.

RELATED ARTICLES
- Advertisment -
Google search engine

Most Popular