Saturday, April 19, 2025
Google search engine

Homeರಾಜ್ಯಬೆಂಗಳೂರಿನಲ್ಲಿ ಭಾರೀ ಮಳೆ: ಮರದ ಕೊಂಬೆ ಬಿದ್ದು 6 ಜನರಿಗೆ ಗಾಯ

ಬೆಂಗಳೂರಿನಲ್ಲಿ ಭಾರೀ ಮಳೆ: ಮರದ ಕೊಂಬೆ ಬಿದ್ದು 6 ಜನರಿಗೆ ಗಾಯ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಮರದ ಕೊಂಬೆ ಬಿದ್ದ ಪರಿಣಾಮ ೬ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಾರುತಿ ಸೇವಾನಗರದಲ್ಲಿ ಮರದ ಕೊಂಬೆ ಬಿದ್ದು ಆರು ಮಂದಿ ಗಾಯಗೊಂಡಿದ್ದಾರೆ. ಸದ್ಯ ಬಿಬಿಎಂಪಿ ಸಿಬ್ಬಂದಿ ಕೊಂಬೆ ತೆರವು ಮಾಡಿದ್ದಾರೆ. ಓಕುಳಿಪುರಂ ನಲ್ಲಿ ಅಂಡರ್ ಪಾಸ್ ಗೆ ನೀರು ನುಗ್ಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಕ್ಕೂರಿನಲ್ಲಿ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಮುಳುಗಡೆಯಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಂಭಾಗದ ರಸ್ತೆಗಳು ಮುಳುಗಡೆಯಾಗಿವೆ.

ಸುಮಾರು ಎರಡು ಅಡಿಯಷ್ಟು ರಸ್ತೆಯಲ್ಲಿ ನೀರು ನಿಂತಿದೆ.ಮೆಜೆಸ್ಟಿಕ್, ಓಕಳಿಪುರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೋರೇಷನ್ ಸರ್ಕಲ್, ಟೌನ್ ಹಾಲ್, ಕೆ.ಆರ್.ನಗರ, ಜಯನಗರ, ಶಾಂತಿನಗರ, ತ್ಯಾಗರಾಜನಗರ, ಶ್ರೀನಗರ, ರಾಜಾಜಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಹನುಮಂತನಗರ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಹೆಬ್ಬಾಳ, ಯಲಹಂಕ ಸುತ್ತಾಮುತ್ತಾ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ.

RELATED ARTICLES
- Advertisment -
Google search engine

Most Popular