Saturday, April 19, 2025
Google search engine

Homeರಾಜ್ಯಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸೂಚನೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ.

ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು, ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್,  ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular