ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮಳೆಯ ಅಬ್ಬರ ಜೋರಾಗಿದೆ. ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಪಾಯದ ಮಟ್ಟ ತಲುಪುತ್ತಿದೆ.
ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ 8.2 ಮೀ. ಗೆ ತಲುಪಿತು.

ಪರಿಣಾಮ ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.