Sunday, April 20, 2025
Google search engine

Homeರಾಜ್ಯಸುದ್ದಿಜಾಲದಾವಣಗೆರೆಯಲ್ಲಿ ಭಾರೀ ಮಳೆ: ಆಸ್ಪತ್ರೆ ಒಳಗೆ ನುಗ್ಗಿದ ನೀರು

ದಾವಣಗೆರೆಯಲ್ಲಿ ಭಾರೀ ಮಳೆ: ಆಸ್ಪತ್ರೆ ಒಳಗೆ ನುಗ್ಗಿದ ನೀರು

ದಾವಣಗೆರೆ: ಹೊನ್ನಾಳಿಯಲ್ಲಿ ರಾತ್ರಿ ಭಾರೀ ಮಳೆಯಾಗಿದ್ದು ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ.

ಜನರಲ್ ವಾರ್ಡ್, ಐಸಿಯು ವಾರ್ಡ್ ಗಳಿಗೂ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ, ಔಷಧ ವಿತರಣಾ ಕೊಠಡಿ, ಹೆರಿಗೆ ವಾರ್ಡ್ ಗೆ ನೀರು ನುಗ್ಗಿದ್ದು, ವಾರ್ಡ್ ನಲ್ಲಿದ್ದ ಬಾಣಂತಿಯರು ಹಾಗೂ ಐಸಿಯು ಘಟಕದಲ್ಲಿನ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ. ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕ್ರೀಡಾಂಗಣದಿಂದ ಆಸ್ಪತ್ರೆಗೆ ನೀರು ಹರಿದಿದೆ.

RELATED ARTICLES
- Advertisment -
Google search engine

Most Popular