ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಜುಲೈ.7) ತಿಳಿಸಿದ್ದಾರೆ.
ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು (Amarnath Yatra) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಜುಲೈ.7) ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಬಾಲ್ಟಾಲ್ ಮತ್ತು ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆಯತ್ತ ತೆರಳಲು ಅನುಮತಿ ನೀಡಲ್ಲ ಎಂದು ಅವರು ಹೇಳಿದರು.
3,200 ಯಾತ್ರಾರ್ಥಿಗಳನ್ನು ನುನ್ವಾನ್ ಪಹಲ್ಗಾಮ್ ಶಿಬಿರದಲ್ಲಿ ಮತ್ತು 4,000 ಯಾತ್ರಾರ್ಥಿಗಳನ್ನು ಬಾಲ್ಟಾಲ್ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 80,000ಕ್ಕೂ ಹೆಚ್ಚು ಭಕ್ತರು ಯಾತ್ರೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.