Thursday, April 3, 2025
Google search engine

HomeUncategorizedರಾಷ್ಟ್ರೀಯತಮಿಳುನಾಡಿನಲ್ಲಿ ಭಾರಿ ಮಳೆ: ಇಂದು ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಭಾರಿ ಮಳೆ: ಇಂದು ಶಾಲೆಗಳಿಗೆ ರಜೆ

ಚೆನ್ನೈ: ತಮಿಳುನಾಡಿನಾದ್ಯಂತ ಇಂದು (ನ.12) ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿನ ಶಾಲೆಗಳಿಗೆ ಬುಧವಾರ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆ ಮಾಹಿತಿಯಂತೆ ಬುಧವಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರ್, ಪುದುಕೊಟ್ಟೈ, ರಾಮನಾಥಪುರಂ, ವಿಲ್ಲುಪ್ಪುರಂ, ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿತ್ತು ಅದರಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳವಾರ ರಾತ್ರಿ ತಿರುವಳ್ಳೂರು, ಚೆನ್ನೈ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿರುವ ಬಗ್ಗೆ ಬಗ್ಗೆ ವರದಿಯಾಗಿದೆ.

RELATED ARTICLES
- Advertisment -
Google search engine

Most Popular