Wednesday, July 15, 2026
Google search engine

Homeರಾಜ್ಯಪೊಲೀಸರಿಗೆ ಸವಾಲು ಹಾಕಿದ್ದ ಡ್ರಗ್ ಜಾಲಕ್ಕೆ ಹೆಬ್ಬಾಳ ಪೊಲೀಸರ ಶಾಕ್ : ₹34 ಕೋಟಿ ಮೌಲ್ಯದ...

ಪೊಲೀಸರಿಗೆ ಸವಾಲು ಹಾಕಿದ್ದ ಡ್ರಗ್ ಜಾಲಕ್ಕೆ ಹೆಬ್ಬಾಳ ಪೊಲೀಸರ ಶಾಕ್ : ₹34 ಕೋಟಿ ಮೌಲ್ಯದ MDMA ವಶ

ಬೆಂಗಳೂರು : ಕರ್ನಾಟಕ ಪೊಲೀಸರು ಏನೂ ಮಾಡಲು ಸಾಧ್ಯವಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಸವಾಲು ಹಾಕಿದ್ದ ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳ ಜಾಲವನ್ನು ಹೆಬ್ಬಾಳ ಪೊಲೀಸರು ಭೇದಿಸಿದ್ದಾರೆ. ನೈಜೀರಿಯಾ ಪ್ರಜೆ ಸೇರಿ ನಾಲ್ವರು ಕುಖ್ಯಾತ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಪೊಲೀಸರು, ಆರೋಪಿಗಳಿಂದ ಸುಮಾರು ₹34 ಕೋಟಿ ಮೌಲ್ಯದ 17 ಕೆಜಿ 580 ಗ್ರಾಂ ಎಂಡಿಎಂಎ (MDMA) ಕ್ರಿಸ್ಟಲ್ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಹೆಬ್ಬಾಳ ಪೊಲೀಸರು ₹34 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಎಂಟು ಮಂದಿಯನ್ನು ಬಂಧಿಸಿದ್ದರು. ಈ ಕಾರ್ಯಾಚರಣೆಯ ಬಳಿಕ ವಿದೇಶದಲ್ಲಿದ್ದ ಜಾಲದ ಪ್ರಮುಖ ಆರೋಪಿ ಸ್ಥಳೀಯ ಪೆಡ್ಲರ್‌ಗಳಿಗೆ ಸಂದೇಶ ಕಳುಹಿಸಿ, ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಮುಂದುವರಿಸುವಂತೆ ಪ್ರಚೋದಿಸಿದ್ದ ಎನ್ನಲಾಗಿದೆ. ಕರ್ನಾಟಕ ಪೊಲೀಸರು ಕಠಿಣ ಕ್ರಮ ಕೈಗೊಂಡರೂ ದಂಧೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಸವಾಲು ಹಾಕಿದ್ದ ಈ ಜಾಲವನ್ನು ಇದೀಗ ಪೊಲೀಸರು ಪತ್ತೆಹಚ್ಚಿದ್ದಾರೆ.

ಪೊಲೀಸರ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಖಾದ್ಯ ಪದಾರ್ಥಗಳ ಪ್ಯಾಕೆಟ್‌ಗಳಲ್ಲಿ ಎಂಡಿಎಂಎ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದ್ದು, ಖಚಿತ ಮಾಹಿತಿ ಆಧರಿಸಿ ಹೆಬ್ಬಾಳ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿ ಬೆಂಗಳೂರು ಹಾಗೂ ದೆಹಲಿಯಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದರು.

ನಾಲ್ವರು ಆರೋಪಿಗಳ ಬಂಧನ : ಕಾರ್ಯಾಚರಣೆಯಲ್ಲಿ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ ನೈಜೀರಿಯಾ ಮೂಲದ ಸೊಲೊಮನ್ ಟಚುಕ್ಯೂ ಎಂಬಾತನನ್ನು ಬಂಧಿಸಲಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಡ್ರಗ್ಸ್ ವಿತರಣೆ ಮಾಡುತ್ತಿದ್ದ ಮಣಿಪುರ ಮೂಲದ ರಾಕಾಂಗ್ಮಿ ತನಿರೋಸ್, ಸ್ಥಳೀಯರಾದ ಮೋಹನ್ ಕುಮಾರ್ ಮತ್ತು ಜಾನ್ಸನ್ ಅವರನ್ನು ಬಂಧಿಸಲಾಗಿದೆ.

ಪೊಲೀಸರ ಕಾರ್ಯಾಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಡ್ರಗ್ಸ್ ಜಾಲದ ವಿರುದ್ಧದ ಹೋರಾಟದಲ್ಲಿ ಇದು ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ.


RELATED ARTICLES
- Advertisment -
Google search engine

Most Popular