ಮಂಡ್ಯ: ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ತೊಟ್ಟಿಲುಮಡು ಜಾತ್ರೆ ವೇಳೆ ಹೆಜ್ಜೇನು ದಾಳಿ ಮಾಡಿದ್ದು, 30 ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. 17 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.
ಪಾಂಡವಪುರ ತಾಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ತೊಟ್ಟಿಲುಮಡು ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಜನ ಭಕ್ತರು ಆಗಮಿಸಿದ್ದರು. ಈ ವೇಳೆ ಏಕಾಏಕಿ ಭಕ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದೆ.
ಜಾತ್ರೆ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದರು. ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ಮಾಡಿದೆ.
ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಭಕ್ತರು ದಿಕ್ಕಪಾಲಾಗಿ ಓಡಿದ್ದಾರೆ. ಹೆಜ್ಜೇನು ದಾಳಿಗೆ ಸಿಲುಕಿ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಜೇನುದಾಳಿಗೆ ಒಳಗಾದವರಿಗೆ ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.