ಶ್ರೀರಂಗಪಟ್ಟಣ: ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ಮಾಡಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ನ ಬಳಿಯ ಪ್ರವಾಸಿ ಸ್ಥಾನ ಕಾವೇರಿ ಸಂಗಮದಲ್ಲಿ ನಡೆದಿದೆ.
ಘಟನೆಯಲ್ಲಿ ಹೆಜ್ಜೇನು 15 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ಗಂಭೀರ ಗಾಯಗೊಂಡ ಮೂವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆ ದಿಕ್ಕಾಪಾಲಾಗಿ ಪ್ರವಾಸಿಗರು ಓಡಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
